ಎಣ್ಣೆ ಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಎಣ್ಣೆ ಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ನ. 17ರಂದು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಗನವಾಡಿ ಪುಟಾಣಿ ಕು. ದಿತಿ ಕೊರಪ್ಪಣೆ ವಹಿಸಿದ್ದರು. ಕು. ಹಂಸಿಕ ಕೊರಪ್ಪಣೆ ದೀಪ ಬೆಳಗಿಸಿ ಉದ್ಘಾಟಿಸಿದರು. ಅಂಗನವಾಡಿ ಪುಟಾಣಿಗಳು ಪ್ರಾರ್ಥನೆ ಮಾಡಿದರು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆಯಾದ ಶ್ರೀಮತಿ ಪುಷ್ಪಾವತಿ ಕೊರಪ್ಪಣೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕಿ ಶ್ರೀಮತಿ ಕಾವ್ಯ ಉಪಸ್ಥಿತರಿದ್ದರು. ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಬಹುಮಾನವನ್ನು ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಮಿತ್ರಾ ಬುಡೆಂಗಿ ಕೊಡುಗೆಯಾಗಿ ನೀಡಿದ್ದರು. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಸ್ತ್ರೀಶಕ್ತಿ ಸದಸ್ಯರುಗಳು, ಅಂಗನವಾಡಿ ಸಹಾಯಕಿ ಶ್ರೀಮತಿ ವಸಂತಿ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಶ್ರೀಮತಿ ರಾಧಾ ಕೆ.ಎಮ್ ಸ್ವಾಗತಿಸಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹರಿಣಾಕ್ಷಿ ವಂದಿಸಿದರು.