ನ.26 ರಂದು ಮಡಪ್ಪಾಡಿಯಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

0

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘ ‘ರಿ’ ಸುಳ್ಯ, ಕೆ.ವಿ.ಜಿ. ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಟತ್ರೆ, ಕೆ.ವಿ.ಜಿ. ದಂತ ಮಹಾ ವಿದ್ಯಾಲಯ ಮತ್ತು ಆಸ್ಟತ್ರೆ, ಕೆ.ವಿ.ಜಿ. ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಟತ್ರೆ ಹಾಗೂ ಮಡಪ್ಪಾಡಿ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿದೆ ಉಚಿತ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಹಿರಿಯ ನಾಗರೀಕರಿಗೆ ಗುರುತಿನ ಚೀಟಿ ಮಾಡಿ ಕೊಡುವ ಶಿಬಿರವನ್ನು ನ.26ರಂದು ಸರಕಾರಿ ಉನ್ನತೀಕರಿಸಿದ ಸ.ಹಿ.ಪ್ರಾ. ಶಾಲೆ ಮಡಪ್ಪಾಡಿ ಇಲ್ಲಿ ನಡೆಸಲಾಗುವುದು. ಈ ಕಾರ್ಯಕ್ರಮದಲ್ಲಿ ಎಲ್ಲಾ ರೀತಿಯ ಕಾಯಿಲೆಗಳಿಗೆ ತಜ್ಞ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಇದರ ಜೊತೆಗೆ ಆರೋಗ್ಯ ಇಲಾಖೆಯಿಂದ ರಕ್ತ ವರ್ಗೀಕರಣ ಗುಂಪು ಕಾರ್ಡ್ ಹಾಗೂ ಆಯುಷ್ಮಾನ್ ಕರ್ನಾಟಕ ಉಚಿತ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರ ಜೊತೆಗೆ ಹಿರಿಯ ನಾಗರೀಕರಿಗೆ ಗುರುತಿನ ಚೀಟಿಯನ್ನು ಸಹಾ ಮಾಡಿ ಕೊಡಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ‘ರಿ’ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ನಡೆಸಿ ಕೊಡಲಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಇವರು ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ, ಕೃಷಿ ಪತ್ತಿನ ಸಹಕಾರಿ ಸಂಘದ ಅದ್ಯಕ್ಷರಾದ ಪಿ. ಸಿ. ಜಯರಾಮ, ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಪೂರ್ವಾಧ್ಯಕ್ಷ ನಿತ್ಯಾನಂದ ಮುಂಡೋಡಿ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಚಿನ್ ಬಳ್ಳಡ್ಕ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯ ಕ್ರಮದಲ್ಲಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಯುವಕ ಮಂಡಲ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ, ಶ್ರೀ ರಾಮ ಭಜನಾ ಮಂಡಳಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ, ಗ್ರಾಮ ಪಂಚಾಯತ್ ಮಡಪ್ಪಾಡಿ, ಲಯನ್ಸ್ ಕ್ಲಬ್ ಗುತ್ತಿಗಾರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಡಪ್ಪಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಪ್ಪಾಡಿ ಉಪಕೇಂದ್ರ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘ ಸ.ಉ.ಹಿ.ಪ್ರಾ. ಶಾಲೆ ಮಡಪ್ಪಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಂಜೀವಿನಿ ಒಕ್ಕೂಟ, ಕ್ಷೇತ್ರ ಒಡಿಯೂರು ಸಂಘ, ಲಕ್ಷ್ಮಿ ಯುವತಿ ಮಂಡಲ ಬಲ್ಕಜೆ ಇವರು ಸಹಕಾರ ನೀಡಲ್ಲಿದ್ದಾರೆ.

ಈ ಕಾರ್ಯಕ್ರಮದ ಸದುಪಯೋಗವನ್ನು ಮಡಪ್ಪಾಡಿ ಆಸುಪಾಸಿನ ನಾಗರಿಕರು ಪಡೆದು ಕೊಳ್ಳಲು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು ಹಾಗೂ ಸರ್ವ ಸಂಘಟನೆಗಳ ಅಧ್ಯಕ್ಷರು ತಿಳಿಸಿರುತ್ತಾರೆ.