ಕೊಡಗು ಜಿಲ್ಲಾ ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾಕೂಟದಲ್ಲಿ ಸಂಪಾಜೆ ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ಕೊಡಗು ಜಿಲ್ಲಾ ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕ್ರೀಡಾ ಕೂಟದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹರ್ಷಾನ ಹೆಚ್. ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಬಾಲಕರ ವಿಭಾಗದ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ಜಗನ್ ಡಿ .ಹೆಚ್. ದ್ವಿತೀಯ ಸ್ಥಾನವನ್ನು
ಪಡೆದಿದ್ದಾರೆ. ಈ ಮೂಲಕ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.