ಸುಳ್ಯ: ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ

0

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸಂವಿಧಾನ ದಿನವನ್ನು ನ.26 ರಂದು ಆಚರಿಸಲಾಯಿತು. ಕಾರ್ಯ ಕ್ರಮದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿ ಫಾತಿಮಾತ್ ಸೈಹಾ ಸಂವಿಧಾನದ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. ಶಾಲಾ ವಿದ್ಯಾರ್ಥಿಗಳು ಸಂವಿಧಾನದ ಪೂರ್ವ ಪೀಠಿಕೆಯನ್ನು ಹಾಡಿದರು. ಧರ್ಮ ಗುರುಗಳಾದ ಪಾ. ವಿಕ್ಟರ್ ಡಿಸೋಜ ಸಂವಿಧಾನದ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. 8ನೇ ತರಗತಿ ವಿದ್ಯಾರ್ಥಿ ಅನೀಂದ್ರಿತ ಕಾರ್ಯಕ್ರಮವನ್ನು ನಿರೂಪಿಸಿದರು .

ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಪುರುಷೋತ್ತಮ, ಶಿಕ್ಷಕಿ ಶ್ರೀಮತಿ ರೀಟಲತಾ ಮತ್ತು ಶಿಕ್ಷಕ ಶಿವಾನಂದ ಕಾರ್ಯಕ್ರಮವನ್ನು ಸಂಯೋಜಿಸಿದರು. ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.