ಮದ್ಯಪಾನಗೈದು ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಎ.ಪಿ.ಎಂ.ಸಿ. ಅಧಿಕಾರಿ

0

ಸಾರ್ವಜನಿಕರಿಂದ ಅಡ್ಡಗಟ್ಟಿ ವಿಚಾರಣೆ

ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು
ಮದ್ಯಪಾನಗೈದು ರಾಜ್ಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಹಾಗೂ ಅಪಾಯವನ್ನರಿತು ಅಡ್ಡಗಟ್ಟಿದ ಸ್ಥಳೀಯರಲ್ಲಿ‌ ಕ್ಷಮೆ ಯಾಚಿಸುವ ವೀಡಿಯೋ ವೈರಲ್ ಆದ ಘಟನೆ ಇದೀಗ ವರದಿಯಾಗಿದೆ.

ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮ ಫಲಕವಿರುವ ಬೊಲೇರೋ ವಾಹನವನ್ನು ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು.

ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಚಯ ಕೇಳಿದಾಗ ಆ ವ್ಯಕ್ತಿಯು ತಾನು ಸುಳ್ಯ ಎ.ಪಿ.ಎಂ.ಸಿ. ಕಾರ್ಯದರ್ಶಿ,
ನನ್ನದು ತಪ್ಪಾಯಿತೆಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.