ಶಾರದಾ ಹೆಣ್ಮಕ್ಕಳ ಪ್ರೌಢಶಾಲೆ ಮತ್ತು ಕಾಲೇಜು ವಿಭಾಗದ ವಾರ್ಷಿಕ ಕ್ರೀಡಾಕೂಟ

0

ಸುಳ್ಯ ಶ್ರೀ ಶಾರದ ಹೆಣ್ಮಕ್ಕಳ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನ.29 ರಂದು ನಡೆಯಿತು.


ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತ ಎ.ಸಿ. ರವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನಂದರವರು ಅತಿಥಿಯಾಗಿದ್ದರು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಶ್ರೀಮತಿ ರೇವತಿ ನಂದನ್ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪ್ರಭಾವತಿ ಎಸ್. ಪ್ರಮಾಣವಚನವನ್ನು ಬೋಧಿಸಿದರು.


ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ದಿವಿಶ್ ಕುಮಾರ್ ಮತ್ತು ನಾರಾಯಣ ಜಟ್ಟಿಪಳ್ಳ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಬಾಲಚಂದ್ರ ಉಪಸ್ಥಿತರಿದ್ದರು. ಪ್ರಾಂಶುಪಾಲೆ ಶ್ರೀಮತಿ ದಯಾಮಣಿ ಕೆ. ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ ಪಿ. ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರ ಬ್ಯಾಂಡ್ ಸೆಟ್ ನೊಂದಿಗೆ ಆಕರ್ಷಕ ಪಥ ಸಂಚಲನ ನಡೆಯಿತು. ಈ ಸಂದರ್ಭದಲ್ಲಿ ಪೋಷಕರಿಗೆ ಅನೇಕ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.