ನಾಳೆ ಸುಳ್ಯದಲ್ಲಿ ಕೆ.ಜೆ.ಯು.ವತಿಯಿಂದ ಪತ್ರಕರ್ತರಿಗೆ ಕ್ರೀಡಾಕೂಟ

0


ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಸುಳ್ಯ ತಾಲೂಕಿನ ಪತ್ರಕರ್ತರಿಗೆ ಮತ್ತು ಅವರ ಮನೆಯವರಿಗೆ ಕ್ರೀಡಾಕೂಟ ನ.೩೦ರಂದು ಸುಳ್ಯ ಪ್ರೆಸ್ ಕ್ಲಬ್ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ ೯ ಗಂಟೆಗೆ ಕ್ರೀಡಾಕೂಟ ಉದ್ಘಾಟನೆಗೊಳ್ಳಲಿದ್ದು, ಕ್ರೀಡಾಕೂಟದಲ್ಲಿ ಪುರುಷರಿಗೆ, ಮಹಿಳೆಯರಿಗೆ ಹಗ್ಗಜಗ್ಗಾಟ, ಗುಂಡೆಸೆತ, ನಿಧಾನ ಬೈಕ್ ರೇಸ್, ಸಂಗೀತ ಕುರ್ಚಿ, ಲಕ್ಕಿಗೇಮ್ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಮಕ್ಕಳಿಗೂ ವಿವಿಧ ಸ್ಪರ್ಧೆ ನಡೆಯಲಿದೆ. ಸಂಜೆ ಸಮಾರೋಪ ಮತ್ತು ಬಹುಮಾನ ವಿತರಣೆ ನಡೆಯಲಿದೆ.
ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕೆಜೆಯು ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಈಶ್ವರ್ ವಾರಣಾಶಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಕಾರ್ಯನಿರತ ಪತ್ರಕರ್ತರ ಸಂಘದ ಸುಳ್ಯ ತಾ.ಘಟಕದ ಅಧ್ಯಕ್ಷ ದಯಾನಂದ ಕಲ್ನಾರು, ಉದ್ಯಮಿ ಲತೀಫ್ ಹರ್ಲಡ್ಕ ಉಪಸ್ಥಿತರಿರುವರು.
ಸಮಾರೋಪ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸುಳ್ಯ ಸರ್ಕಲ್ ಇನ್‌ಸ್ಪೆಕ್ಟರ್ ಮೋಹನ ಕೊಠಾರಿ ಬಹುಮಾನ ವಿತರಿಸಲಿದ್ದಾರೆ. ಮಡಪ್ಪಾಡಿ ಗ್ರಾಪಂ. ಮಾಜಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜುನಾಥ ಬಳ್ಳಾರಿ, ಓಂಶಕ್ತಿ ಎಂಟರ್‌ಪ್ರೈಸಸ್‌ನ ಜಗದೀಶ್, ಉದ್ಯಮಿ ಶಾಫಿ ಕುತ್ತಮೊಟ್ಟೆ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಸಂಘಟಕರು ತಿಳಿಸಿದ್ದಾರೆ.