ಕೆ.ವಿ.ಜಿ ಕಾನೂನು ವಿದ್ಯಾರ್ಥಿಗಳ 2023-24 ನೇ ತರಗತಿ ಆರಂಭ

0

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷದ ಮೂರು ಮತ್ತು ಐದು ವರ್ಷಗಳ ಕಾನೂನು ವಿದ್ಯಾರ್ಥಿಗಳ ಪ್ರಸ್ತುತ ಕಾನೂನು ವಿದ್ಯಾಭ್ಯಾಸದ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ. ಬಿ ವಹಿಸಿದ್ದರು. ಉದ್ಘಾಟಕರಾಗಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಹೇಮನಾಥ್ ಕೆ.ವಿ ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನು ವಿದ್ಯಾಭ್ಯಾಸದ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಗಳಾಗಿ ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಮಿಥಾಲಿ ರೈ ಉಪಸ್ಥಿತರಿದ್ದರು.

ಕಾನೂನು ವಿದ್ಯಾಭ್ಯಾಸದ ಮಹತ್ವವನ್ನು ವಿವರಿಸುತ್ತಾ ವಿದ್ಯಾರ್ಥಿಗಳು ಕಾನೂನು ವಿದ್ಯಾಭ್ಯಾಸದಲ್ಲಿ ಸಂಪೂರ್ಣ ತೊಡಗಿಸಿಕೊಂಡು ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಿ ಬದುಕಿ ಎಂದು ಹಾರೈಸಿದರು. ವಿದ್ಯಾರ್ಥಿ ಅನೀಶ್ ಪ್ರಾರ್ಥಿಸಿದರು, ಉಪನ್ಯಾಸಕಿ ಟೀನಾ ಹೆಚ್.ಎಸ್ ಸ್ವಾಗತಿಸಿ, ಉಪನ್ಯಾಸಕಿ ಕಲಾವತಿ. ಎಮ್ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಆರ್ಚನಾ ಆರ್.ರೈ ಕಾರ್ಯಕ್ರಮ ನಿರೂಪಿಸಿದರು.