ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

0


ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಕ್ರೀಡಾಪಟು ಸಂಶುದ್ದಿನ್ ಆರಂತೋಡು ಅವರು ಆಗಮಿಸಿದ್ದು ಮಕ್ಕಳಲ್ಲಿ ಕ್ರೀಡೆಯ ಮಹತ್ವವನ್ನು ಜಾಗೃತಿಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪ್ರಾಶುಪಾಲರಾದ ಡಾ. ಯಶೋದಾ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಿ ಇ ಒ ಡಾ. ಉಜ್ವಲ್ ಯು ಜೆ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಿಂದಾಗುವ ಉಪಯೋಗ ಹಾಗೂ ಮಾನಸಿಕ ಒತ್ತಡ ನಿಯಂತ್ರಣ ಕುರಿತು ಸಂಪೂರ್ಣ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಅವರು ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಮೋಕ್ಷ ಆರ್ ನಾಯಕ್, ಚಿದಾನಂದ ಬಾಳಿಲ ಹಾಗೂ ಸಂಸ್ಥೆಯ ಸಿಬ್ಬಂದಿಗಳಾದ ಭವಾನಿಶಂಕರ ಅಡ್ತಲೆ,ದಿನೇಶ್ ಮಡ್ತಿಲ, ಮಾಧವ ಬಿ ಟಿ, ಡಾ.ಮನೋಜ್,ಬಾಲಪ್ರದೀಪ್, ಕಮಲಾಕ್ಷ ನಂಗಾರು ಮತ್ತು ದೈಹಿಕ ಶಿಕ್ಷಕರಾದ ಭಾಸ್ಕರ ಬಳಗದ್ದೆ, ತೀರ್ಥವರ್ಣ, ಸುಪ್ರಿಯಾ ಹಾಗೂ ಕಾಲೇಜಿನ ಉಪಾಪ್ರಾಂಶುಪಾಲರಾದ ದೀಪಕ್ ವೈ ಆರ್, ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಮಧುರ ಬಾಷಿನಿ,ಬೃಂದಾ ಸುರೇಶ್, ರಿತಿ ಆಳ್ವಾ ,ಸಿಂಚನಾ ಅವರು ಕಾರ್ಯಕ್ರಮ ನಿರೂಪಿಸಿದರು.