ಬಿ.ಸಿ.ಎಂ. ಇಲಾಖೆ : ವಿದ್ಯಾಸಿರಿ, ವಸತಿ ಯೋಜನೆ ಗೆ ಆನ್ ಲೈನ್ ಅರ್ಜಿ

0

ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ಮರುಪಾವತಿ, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಂದ ಆನ್‌ಲೈನ್’ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು : 10-01-2024 ಸಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಅದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ. ಅರ್ಜಿಯನ್ನು

: https://ssp.postmatric.karnataka.gov.in

ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ‌ಕಲ್ಯಾಣ ಅಧಿಕಾರಿ ಕಚೇರಿ,
ದೇವರಾಜ ಅರಸು ಭವನ ಅಮೈ ಕೊಡಿಯಾಲ್ ಬೈಲ್, ಸುಳ್ಯ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 08257-230659.