ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇದರ
2023 -24ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟವು ನ.30 ರಂದು ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಸಂಸ್ಥೆಯ ಹಿರಿಯ ವಿದ್ಯಾರ್ಥಿ ಪ್ರಸ್ತುತ ಬೆಂಗಳೂರಿನಲ್ಲಿ ಹುದ್ದೆಯಲ್ಲಿ ಇರುವ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟು ಪ್ರೀತಮ್ ಬಿ.ಡಿ ನೆರವೇರಿಸಿದರು. ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಶಿವರಾಮ ನೆಕ್ರಾಜೆ ಧ್ವಜಾರೋಹಣ ನೆರವೇರಿಸಿದರು.

ಅಧ್ಯಕ್ಷತೆಯನ್ನು ಗಣೇಶ್ ಪ್ರಸಾದ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶಿವರಾಮ್ ಏನೆಕಲ್ಲು, ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭಾರತಿ ದಿನೇಶ್ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀ ಲಕ್ಷ್ಮಿ ಸ್ವಾಗತಿಸಿ, ಶಿಕ್ಷಕಿ ಸವಿತ ವಂದಿಸಿದರು. ಶಿಕ್ಷಕ ಆನಂದ್ ಕಾರ್ಯಕ್ರಮ ನಿರೂಪಿಸಿದರು.