ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ : ಲಾಂಗ್ ಜಂಪ್ ಮತ್ತು ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದ ಸಂಪಾಜೆಯ ಯಾಸಿರ್ ಬಿ. ಕೆ.

0

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಬೆಂಗಳೂರಿನ ಯಲಹಂಕ ದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಕ್ರೀಡಾ ಕೂಟದಲ್ಲಿ ಲಾಂಗ್ ಜಂಪ್ ಮತ್ತು 100×4 ರಿಲೇ ಸ್ಪರ್ಧೆಯಲ್ಲಿ ಸಂಪಾಜೆ ಗ್ರಾಮದ ಕಲ್ಲುಗುಂಡಿ ಚಟ್ಟೆಕಲ್ಲು ನಿವಾಸಿ ಯಾಸಿರ್ ಬಿ ಕೆ ರವರು ದ್ವೀತೀಯ ಸ್ಥಾನ ಪಡೆದಿದ್ದಾರೆ.
ಇವರು ಆಂಟಿ ನಕ್ಸಲ್ ಫೋರ್ಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ಕೊಡಗು ಜಿಲ್ಲೆಯ ಭಾಗಮಂಡಲ ದಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.