ಮಂಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಗೆ ಮಧು ಬಂಗಾರಪ್ಪರಿಂದ ಅಭಿಪ್ರಾಯ ಸಂಗ್ರಹ

0

ಸುಳ್ಯದ ಮುಖಂಡರುಗಳು ಭಾಗಿ

ದ.ಕ .ಜಿಲ್ಲೆಯ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರು ಡಿ. 2 ರಂದು ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಅಭಿಪ್ರಾಯ ಸಂಗ್ರಹ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಸುಳ್ಯದ ಮುಖಂಡರುಗಳಾದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಕೆಪಿಸಿಸಿ ಸದಸ್ಯ ಜಿ.ಕೃಷ್ಣಪ್ಪ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಮಾಜಿ ಕೆಪಿಸಿಸಿ ಕಾರ್ಯದರ್ಶಿ ಟಿ ಎಂ ಶಾಹಿದ್,ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸದಸ್ಯ ಕೆ ಎಂ ಮುಸ್ತಾಫಾ, ಸುಳ್ಯ ಬ್ಲಾಕ್ ಮಾಜಿ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಸಾಮಾಜಿಕ ಜಾಲತಾಣ ಮಾಜಿ ಅಧ್ಯಕ್ಷ ಚೇತನ್ ಕಜೆಗದ್ದೆ, ಡಿಸಿಸಿ ಸದಸ್ಯ ನಂದರಾಜ್ ಸಂಕೇಶ, ಮಹಮ್ಮದ್ ಪವಾಜ್, ಶರೀಫ್ ಕಂಠಿ ಮತ್ತಿತರರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಮುಖಂಡರುಗಳು ಅಭಿಪ್ರಾಯ ವ್ಯಕ್ತಪಡಿಸಿ ಪ್ರಸ್ತುತ ಯಾರಿಗೆ ಟಿಕೆಟ್ ನೀಡಬೇಕು ಹಾಗೂ ಜಿಲ್ಲೆಯ ಸಮಗ್ರ ವಿಚಾರಗಳನ್ನು ಉಸ್ತುವಾರಿ ಮಧುಬಂಗಾರಪ್ಪ ಅವರ ಗಮನಕ್ಕೆ ನೀಡಿದ್ದಾರೆ ಎನ್ನಲಾಗಿದೆ.