ಸುಳ್ಯ ಶ್ರೀ ಶಾರದಾ ಹೆಣ್ಮಕ್ಕಳ ಪ್ರೌಢಶಾಲೆ – ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

0

ಸುಳ್ಯದ ಶ್ರೀ ಶಾರದಾ ಹೆಣ್ಮಕ್ಕಳ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಗೌಡ ವಿದ್ಯಾಸಂಘ ದ ನಿರ್ದೇಶಕರಾದ ಡಿ. ಎಂ. ಗೌಡ ರವರು ವಿದ್ಯಾರ್ಥಿನಿಯರನ್ನು ಪುರಸ್ಕರಿಸಿ ಶುಭ ಹಾರೈಸಿದರು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘ ದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಎರಡು ಸಂಸ್ಥೆಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ದಿವೀಶ್ ಕುಮಾರ್ ಮತ್ತು ನಾರಾಯಣ. ಜಟ್ಟಿಪಳ್ಳ ಉಪಸ್ಥಿತರಿದ್ದರು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶ್ರೀಮತಿ ಗಾಯತ್ರಿ, ಶ್ರೀಮತಿ ಪ್ರಭಾವತಿ, ಶ್ರೀಮತಿ ಕೃತಿ. ಪಿ. ಎಸ್ ಮತ್ತು ಬಾಲಚಂದ್ರ. ರವರು ನಿರ್ವಹಿಸಿದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ . ಕೆ.ಸ್ವಾಗತಿಸಿ. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭಾರತಿ. ಪಿ. ವಂದಿಸಿದರು. ಶ್ರೀಮತಿ ಅರ್ಪಣಾ. ಜಿ.ಕೆ ರವರು ಕಾರ್ಯಕ್ರಮ ನಿರ್ವಹಿಸಿದರು.