ಎಲಿಮಲೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

0


ಕಳೆದ ವರ್ಷವೂ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ

ಎಲಿಮಲೆ ಸರಕಾರಿ ಪ್ರೌಢಶಾಲೆಯ 1೦ನೇ ತರಗತಿ ವಿದ್ಯಾರ್ಥಿ ಶಮಂತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಚೊಕ್ಕಾಡಿಯವರಾಗಿದ್ದು, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ, ಶಮಂತ್ ಇಂದು ಬೆಳಿಗ್ಗೆ6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಆವರಣದ ಶೌಚಾಲಯದ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಕಳೆದ ವರ್ಷ ಶಮಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಹಲವಾರು ಮಂದಿ ಆತನ ಚಿಕಿತ್ಸೆಗಾಗಿ ನೆರವು ನೀಡಿದ್ದರು.