ಕೆ.ಎಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

0

ಕೆ.ಎಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳು, ವರ್ಷ ನಗರ ನಿಂತಿಕಲ್ಲು ಇದರ ವಾರ್ಷಿಕೋತ್ಸವ “ವರ್ಷವೈಭವ” ಇದರ ಅಂಗವಾಗಿ ನಡೆದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಡಿ. 15ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮೂಹ ವಿದ್ಯಾ ಸಂಸ್ದೆಗಳ ನಿರ್ದೇಶಕರಾದ ಕುಮಾರಸ್ವಾಮಿ ಕೆ.ಎಸ್ ವಹಿಸಿ ವಿದ್ಯಾರ್ಥಿಗಳ ಸಾಧನೆಗೆ ಸತತ ಪ್ರಯತ್ನ ಅಗತ್ಯ ಎಂದು ಹೇಳಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ – ರಕ್ಷಕ ಸಂಘದ ಸದಸ್ಯರಾದ ಸೀತಾರಾಮ ಕೆ, ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ – ರಕ್ಷಕ ಸಂಘದ ಪೂರ್ವಾಧ್ಯಕ್ಷರಾದ ಬಾಲಕೃಷ್ಣ ರೈ ಪಾದೆಕಲ್ಲು, ಕೆ.ಎಸ್ ಗೌಡ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ವೆಂಕಟರಮಣ ಗೌಡ, ಉಪಾಧ್ಯಕ್ಷೆ ಶ್ರೀಮತಿ ರಾಜೀವಿ ರೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ, ಐ.ಟಿ.ಐ ವಿಭಾಗದ ಪ್ರಾಂಶುಪಾಲರಾದ ಸುಧೀರ್ ಎಂ ವಿ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಉಮೇಶ್ ಗೌಡ ಎಚ್ ಉಪಸ್ಥಿತರಿದ್ದರು.

ಪ್ರೌಢಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ ಸ್ವಾಗತಿಸಿದರು. ಐಟಿಐ ವಿಭಾಗದ ಪ್ರಾಚಾರ್ಯರಾರ ಸುಧೀರ್ ಎಂ.ವಿ ಧನ್ಯವಾದ ಸಮರ್ಪಿಸಿದರು. ಐ.ಟಿ.ಐ ವಿಭಾಗದ ಉಪನ್ಯಾಸಕರಾದ ಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಸಮೂಹ ವಿದ್ಯಾಸಂಸ್ಥೆಗಳ ಕಾರ್ಯಕ್ರಮಾಧಿಕಾರಿ ಪ್ರಸನ್ನ ವೈ.ಟಿ ಕಾರ್ಯಕ್ರಮ ಸಂಘಟಿಸಿದರು. ಉಪನ್ಯಾಸಕಿಯರಾದ ಪ್ರಿಯಾ ಎಂ, ರೂಪ ಪಿ.ಜೆ, ತ್ರಪ್ತಿ, ಶಿಕ್ಷಕಿಯರಾದ ವಿಶಾಲಾಕ್ಷಿ, ಪ್ರಜ್ಞಾ, ದೀವಿತಾ ಮತ್ತು ಲಲಿತಾ ವಿವಿಧ ವಿಭಾಗಗಳ ಬಹುಮಾನ ವಿತರಣಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಪ್ರೀ.ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ, ಕಿರಿಯ ಪ್ರಾಥಮಿಕಶಾಲೆ, ಹಿರಿಯ ಪ್ರಾಥಮಿಕ ಶಾಲೆ ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಮತ್ತು ಐಟಿಐ ವಿಭಾಗದ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದರು. ಡಿ 16ರಂದು ವಾರ್ಷಿಕೋತ್ಸವದ ಪ್ರಯುಕ್ತ ಸಭಾ ಕಾರ್ಯಕ್ರಮ, ವಿಶೇಷ ಪ್ರತಿಭಾ ಪುರಸ್ಕಾರ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾರ್ಯಕ್ರಮಾಧಿಕಾರಿಗಳಾದ ಪ್ರಸನ್ನ ವೈ ಟಿ ತಿಳಿಸಿದ್ದಾರೆ.