ಐವರ್ನಾಡು ಗ್ರಾಮ ಪಂಚಾಯತ್ ಮಹಿಳಾ ಗ್ರಾಮ ಸಭೆ

0

ಐವರ್ನಾಡು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಡಿ.15 ರಂದು ಕ್ಕೆ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾ ಭವನದಲ್ಲಿ ನಡೆಯಿತು.

ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸುಳ್ಯ ತಾಲೂಕು CRT ಪ್ರತಿನಿಧಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಆಶಾ, ಆರೋಗ್ಯ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಖಿಗಳು, ಗ್ರಾಮದ ಮಹಿಳೆಯರು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸ್ತ್ರೀರೋಗ ತಜ್ಞರಾದ ಡಾ.ವೀಣಾರವರು ಮಹಿಳೆಯರ ಆರೋಗ್ಯ ಮತ್ತು ಜೀವನ ಶೈಲಿಯ ಬಗ್ಗೆ ಮಾಹಿತಿ ನೀಡಿದರು.