ಸೈಂಟ್ ಜೊಸೆಫ್ ವಿದ್ಯಾಸಂಸ್ಥೆಯಲ್ಲಿ ಕೆ.ವಿ.ಜಿ. ಸಾಧನೆ-ಸಂಸ್ಮರಣೆ ಕಾರ್ಯಕ್ರಮ

0

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಸುಳ್ಯ ಇದರ ಆಶ್ರಯದಲ್ಲಿ ಡಾ. ಕಾರಂಜಿ ವೆಂಕಟ್ರಮಣ ಗೌಡರ 95ನೇ ಜಯಂತ್ಯೋತ್ಸವದ ಸವಿನೆನಪಿಗಾಗಿ ಕೆ. ವಿ. ಜಿ‌. ಸಾಧನೆ- ಸಂಸ್ಕರಣೆ ಹಾಗೂ ಶಾಲಾ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ಕಾರ್ಯಕ್ರಮ ಸೈಂಟ್ ಜೊಸೆಫ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಿತು.
ಕೆವಿಜಿಯವರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ರವರು ಕೆವಿಜಿ ಸಂಸ್ಕರಣೆ ಬಾಷಣ ಮಾಡಿದರು.


ಕೆವಿಜಿ ಸುಳ್ಯ ಹಬ್ಬ‌ ಸಮಿತಿಯ ಹರೀಶ್ ರೈ ಉಬರಡ್ಕ ಹಾಗೂ ರಾಜು ಪಂಡಿತ್ ಮೊದಲಾದವರು ಉಪಸ್ಥಿತರಿದ್ದರು
.

ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಶಾಲಾ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳನ್ನು ಶಾಲಾ ಶಿಕ್ಷಕಿ ದೇವಿಲತಾ ಪರಿಚಯಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ ಸ್ವಾಗತಿಸಿ, ಶಿಕ್ಷಕಿ ಸವಿತಾ ಕುತ್ತಿಮುಂಡ ಧನ್ಯವಾದ ಅರ್ಪಿಸಿದರು. ಶಿಕ್ಷಕರಾದ ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.