ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹುಟ್ಟು ಹಬ್ಬ ಪ್ರಯುಕ್ತ ಸುಳ್ಯ ಜೆಡಿಎಸ್ ವತಿಯಿಂದ ನಾಗಪಟ್ಟಣ ದೇವಸ್ಥಾನದಲ್ಲಿ ವಿಶೇಷ ಪೂಜೆ

0

ಜನತಾದಳ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ 64 ನೇ ಜನ್ಮ ದಿನವನ್ನು ಸುಳ್ಯದ ರಥಬೀದಿಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಆಚರಿಸಲಾಯಿತು.

ಬೆಳಗ್ಗೆ ಸುಳ್ಯ‌ನಾಗಪಟ್ಟಣ ಸದಾಶಿವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬಳಿಕ ಸುಳ್ಯದ ಎಂ.ಬಿ. ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ‌ನಡೆಯುತ್ತಿರುವ ಸಾಂದೀಪ್ ವಿಶೇಷ ಶಾಲೆಯ ಮಕ್ಕಳಿಗೆ ಸಿಹಿ ಹಂಚಲಾಯಿತು.

ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಸುಕುಮಾರ ಕೋಡ್ತುಗುಳಿ, ಮಹಿಳಾ ಘಟಕದ ಅಧ್ಯಕ್ಷೆ ಮಹಾಲಕ್ಷ್ಮಿ ಕೊರಂಬಡ್ಕ, ಜೆಡಿಎಸ್ ಉಪಾಧ್ಯಕ್ಷ ಸುರೇಶ್ ಕುಮಾರ್ ನಡ್ಕ, ಬಾಲಕೃಷ್ಣ ಗೌಡ ಮೂಲೆಮಜಲು, ದೇವರಾಮ ಬಾಳೆಕಜೆ, ರೋಹನ್ ಪೀಟರ್, ರಾಮಚಂದ್ರ ಗೌಡ ಉಬರಡ್ಕ, ನ್ಯಾಯವಾದಿ ಕಾರ್ತಿಕ್ ಗೌಡ ಕೈಕಂಬ ಮೊದಲಾದವರು ಉಪಸ್ಥಿತರಿದ್ದರು. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಸ್ವಾಗತಿಸಿ, ವಂದಿಸಿದರು.