ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ವಾರ್ಷಿಕ ಕ್ರೀಡೋತ್ಸವ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಡಿ.16ರಂದು ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ವಿದ್ಯಾರ್ಥಿಗಳ ಪಥಸಂಚಲನದೊಂದಿಗೆ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಮಟ್ಟದ ಎತ್ತರ ಜಿಗಿತದಲ್ಲಿ ಭಾಗವಹಿಸಿದ ಪ್ರೌಢ ವಿಭಾಗದ ವಿದ್ಯಾರ್ಥಿನಿ ಅಶ್ವತಿ ಮತ್ತು ತಂಡದವರು ಕ್ರೀಡಾ ಜ್ಯೋತಿಯನ್ನು ಉದ್ಘಾಟಕರಿಗೆ ಹಸ್ತಾಂತರಿಸಿದರು. ಕ್ರೀಡೋತ್ಸವವನ್ನು ಉದ್ಘಾಟಿಸಿದ ಸಂಸ್ಥೆಯ ಅಧ್ಯಕ್ಷರಾಗಿರುವ ಡಾ.ಚಂದ್ರಶೇಖರ ದಾಮ್ಲೆಯವರು ಮಾತನಾಡಿ “ಎಲ್ಲರೂ ಕೂಡ ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಕ್ರೀಡೆಯ ಕೀರ್ತಿಯನ್ನು ಪಸರಿಸಿ” ಎಂದರು. ದೈಹಿಕ ಶಿಕ್ಷಕರಾದ ಶ್ರೀ ಚಂದ್ರಶೇಖರ ಮೂಕಮಲೆ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಅವರು ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸವಿತಾ ಎಮ್ ಇವರು ವಂದಿಸಿದರು.