ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಮುಹೂರ್ತ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಡಿ.16 ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್ ಪ್ರಸಾದ್, ಪ್ರಸನ್ನ ದರ್ಬೆ, ಲೊಕೇಶ್ ಮುಂಡೊಕಜೆ, ಮನೋಹರ ರೈ, ಶ್ರೀವತ್ಸಾ, ವನಜಾ ಭಟ್, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಮೇಲ್ವಿಚಾರಣ ಸಮಿತಿ ಸದಸ್ಯರು ಉಪಸ್ಥಿತರಿದ್ದರು.