p>

ಸೋಣಂಗೇರಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟ

0

ಸೋಣಂಗೇರಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟವು ಡಿ.17ರಂದು ನಡೆಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಪ್ರೇಮಾ ಸುರೇಶ್ ರೈ ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ,
ಶಾಲಾ ಮುಖ್ಯೋಪಾಧ್ಯಾಯರು, ಸಾರ್ವಜನಿಕರು ಹಾಗೂ ಹಿರಿಯ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ಶಾಲಾ ಸಹ ಶಿಕ್ಷಕಿಯರಾದ ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಸವಿತಾ, ಶ್ರೀಮತಿ ವೇದಾವತಿ ಶ್ರೀಮತಿ ರೇಖಾ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಚಿದಾನಂದ ಕುಕ್ಕನ್ನೂರು, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಪ್ರಭಾಕರ ರೈ ಕೊಯಿಂಗೋಡಿಮೂಲೆ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಈಶ್ವರ ನಾಯಕ್, ಶ್ರೀಮತಿ ದೀಪ, ಶಿವಪ್ರಸಾದ್ ನೀರಬಸಿರಿ, ಶ್ರೀಮತಿ ಅಂಬಿಕಾ ಉಪಸ್ಥಿತರಿದ್ದು ಸಹಕರಿಸಿದರು.

ಕ್ರೀಡಾ ಸಂಚಾಲಕ ಸತ್ಯ ಶಾಂತಿ ತ್ಯಾಗ ಮೂರ್ತಿ ಸಹಕಾರ ನೀಡಿ ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು.