ಕೊ. ಸಂಪಾಜೆ : ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಮತ್ತೆ ಆರಂಭಗೊಂಡ ಕೋವಿಡ್ ತಪಾಸಣೆ

0

ಕೇರಳ ರಾಜ್ಯದ ವಾಹನಗಳನ್ನು ನಿಲ್ಲಿಸಿ, ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸುತ್ತಿರುವ ಆರೋಗ್ಯ ಇಲಾಖೆ

ಕೊಡಗು ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಮತ್ತೆ ಕೋವಿಡ್ ತಪಾಸಣೆ ಪ್ರಾರಂಭಗೊಂಡಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕೇರಳ ರಾಜ್ಯದಿಂದ ಬರುವ ವಾಹನ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಕೇರಳದ ಕೆಲವು ಕಡೆಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಕೇರಳದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.