ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿ.ಪ್ರಾ.ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟ

0

ದ.ಕ. ಸಂಪಾಜೆ ಗ್ರಾಮದ ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಡಿ.31ರಂದು ಜರುಗಲಿದ್ದು, ಆ ಪ್ರಯುಕ್ತ ಕ್ರೀಡಾಕೂಟವು ಡಿ.19ರಂದು ನಡೆಯಿತು.
ಕ್ರೀಡಾಕೂಟವನ್ನು ಶಾಲಾ ಸಂಚಾಲಕ ಎಸ್. ಪಿ. ಲೋಕನಾಥ್ ಅವರು ದೀಪ ಬೆಳಗಿಸಿ, ಉದ್ಘಾಟಿಸಿ, ಶುಭಹಾರೈಸಿದರು.

ಕ್ರೀಡಾಕೂಟದಲ್ಲಿ ನಿರ್ಣಾಯಕರಾಗಿ ಮತ್ತು ಕಾರ್ಯಕ್ರಮದ ಸಲಹೆಗಾರರಾಗಿ ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್ ಕೈೂಂಗಾಜೆ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಮಚಂದ್ರ ಕಲ್ಲುಗದ್ದೆ, ನಿರ್ದೇಶಕರಾದ ಪಿ. ಎನ್. ಗಣಪತಿ ಭಟ್ ಹಾಜಿ ಅಬ್ದುಲ ಪಿ ಎ., ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬೂಬ್ಕರ್ ಸಿದ್ದೀಕ್, ಉಪಾಧ್ಯಕ್ಷೆ ಶ್ರೀಮತಿ ಆಶಾ ವಿನಯ್ ಸೇರಿದಂತೆ ಸದಸ್ಯರುಗಳು ಮತ್ತು ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಹನುಮಂತಪ್ಪ ಅವರು ವಂದಿಸಿದರು.