ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಐವತ್ತೊಕ್ಲುನ ಶರೀಫ್ ಬಂಧನ‌

0

ಸುಳ್ಯ: ನ್ಯಾಯಾಲಯದ‌ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು‌ ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ‌ 71/2008ರಂತೆ ಕಲಂ 457 ಮತ್ತು 380ರಡಿ ದಾಖಲಾಗಿದ್ದ ಪ್ರಕರಣದ ಆರೋಪಿಯಾಗಿದ್ದು‌ ಕಳೆದ ಐದಾರು‌ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ಶರೀಫ್ ಯಾನೆ ಮಹಮ್ಮದ್ ಶರೀಫ್ (43ವ ) ಎಂಬಾತನನ್ನು ವೇಣೂರು ಠಾಣಾ ಸಿಬ್ಬಂದಿಗಳಾದ ಪ್ರವೀಣ್ ಎಂ. ಮತ್ತು ಸಚಿನ್ ರವರುಗಳು ವಿಟ್ಲದ ಸಾರಡ್ಕದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.