ರಾಧಾಕೃಷ್ಣ ಬೊಳ್ಳೂರು ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ

0

ನಿನ್ನೆಯಷ್ಟೇ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ ದ.ಕ. ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದು, ಇನ್ನು ಕೆಲವೇ ಹೊತ್ತಿನಲ್ಲಿ ಮಂಗಳೂರಿನಲ್ಲಿ ಜಿಲ್ಲಾ ಉಸ್ತುವರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆಂದು ತಿಳಿದು ಬಂದಿದೆ.


ಬೊಳ್ಳೂರುರವರ ಜೊತೆಗೆ ಅವರ ಆಪ್ತರಾದ ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ಬಿಜೆಪಿಯ ಡಿ.ಕೆ.ಸುರೇಶ್ ಹಾಗೂ ಅಮರಮುಡ್ನೂರು ಬಿಜೆಪಿ ಸ್ಥಾನೀಯ ಸಮಿತಿಯ ಕಾರ್ಯದರ್ಶಿ ಸತ್ಯಪ್ರಸಾದ್ ಪುಳಿಮಾರಡ್ಕ ಕೂಡಾ ಕಾಂಗ್ರೆಸ್ ಸೇರಲಿದ್ದಾರೆಂದು ತಿಳಿದು ಬಂದಿದೆ.