ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ವಾರ್ಷಿಕ ಕ್ರೀಡೋತ್ಸವ

0

ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ೨೦೨೩-೨೪ರ ಹಿರಿಯರ ವಿಭಾಗದ ವಾರ್ಷಿಕ ಕ್ರೀಡೋತ್ಸವ ನಡೆಯಿತು. ಶಾಲೆಯ ವಿವಿಧ ಉಪಘಟಕಗಳ ನಾಯಕರು ಕ್ರೀಡಾ ಜ್ಯೋತಿಯನ್ನು ಅಧ್ಯಕ್ಷರಾದ ರುಕ್ಮಯದಾಸ್ ಅವರಿಗೆ ನೀಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯ ದಾಸ್ ಮತ್ತು ಶಾಲಾ ಪ್ರಾಂಶುಪಾಲೆ ಶೋಭಾ ಕಿಶೋರ್, ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕ್ರೀಡೋತ್ಸವಕ್ಕೆ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗಾಗಿ ವಾಲಿಬಾಲ್, ತ್ರೋಬಾಲ್ , ಕಬಡ್ಡಿ ಹೀಗೆ ಮುಂತಾದ ಬೇರೆ ಬೇರೆ ರೀತಿಯ ಕ್ರೀಡೆಗಳನ್ನು ಆಯೋಜಿಸಲಾಯಿತು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸರೀನಾ ಫಾತಿಮಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.