ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ

0

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 95ನೇ ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಡಿಸೆಂಬರ್ 26ರಂದು ನಡೆಯಿತು.


ಅಕಾಡೆಮಿ ಆಫ್ ಲಿಬಲರ್ ಎಜ್ಯುಕೇಶನ್ (ರಿ.)ಸುಳ್ಯ ಇದರ ಕೌಂನ್ಸಿಲ್ ಮೆಂಬರ್ ಶ್ರೀ. ಜಗದೀಶ್ ಅಡ್ತಲೆ ದೀಪ ಬೆಳಗಿಸಿ, ಕುರುಂಜಿ ಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಯವರು ಡಾ.ಕುರುಂಜಿ ವೆಂಕಟ್ರಮಣ ಗೌಡರ ತತ್ವ ಆದರ್ಶಗಳನ್ನು ತಿಳಿಸಿ ಪುಷ್ಪ ನಮನ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಹರ್ಷಿತಾ ಎಂ., ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಕಲಿಕಾ ವೈದ್ಯರುಗಳು ಉಪಸ್ಥಿತರಿದ್ದು ದಿ. ಡಾ.ಕುರುಂಜಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.