ಜಾಲ್ಸೂರು: ಕದಿಕಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವ

0

ಜಾಲ್ಸೂರು ಗ್ರಾಮದ ಕದಿಕಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವವು ಡಿ.28ರಂದು ಜರುಗಿತು. ಬೆಳಿಗ್ಗೆ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಸುಜಾತ ಬೇರ್ಪಡ್ಕ ಅವರು ಧ್ವಜಾರೋಹಣ ನೆರವೇರಿಸಿದರು.

ಶಾಸಕಿ ಭಾಗೀರಥಿ ಮುರುಳ್ಯ ಅವರು ನೂತನ ಶಾಲಾ ಕೊಠಡಿಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ, ಶುಭಹಾರೈಸಿದರು. ನೂತನ ಶಾಲಾ ಕೊಠಡಿಯನ್ನು ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ., ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎ.ಎಲ್., ಜಾಲ್ಸೂರು ಗ್ರಾ.ಪಂ. ಸದಸ್ಯರುಗಳಾದ ಕೆ.ಎಂ. ಬಾಬು ಕದಿಕಡ್ಕ, ಎನ್‌.ಎಂ. ಸತೀಶ ಕೆಮನಬಳ್ಳಿ, ಪಿ.ಆರ್.ಸಂದೀಪ್ ಕದಿಕಡ್ಕ, , ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ. ಶಿಕ್ಷಣ ಸಂಯೋಜಕಿ ಸಂಧ್ಯಾಕುಮಾರಿ, ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲತಾ, ಶ್ರೀ. ಕ್ಷೇ. ಧ.ಗ್ರಾ.ಯೋಜನೆಯ ವಲಯ ಮೇಲ್ವಿಚಾರಕ ತೀರ್ಥರಾಮ, ಶಾಲಾ ಸ್ಥಳದಾನಿ ಜಯರಾಮ ರೈ ಜಾಲ್ಸೂರು, ಶಾಲಾ ಸ್ಥಾಪಕಾಧ್ಯಕ್ಷರ ಪುತ್ರ ಐ.ಕೆ. ಹೇಮಚಂದ್ರ ಕದಿಕಡ್ಕ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾರಿಜ ಬಿ., ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಗಂಗಾಧರ ಕಾಳಮನೆ, ಶಾಲಾ ವಿದ್ಯಾರ್ಥಿ ನಾಯಕಿ ಕು. ತೃಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಪರಾಹ್ನ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಮತ್ತು ಯಕ್ಷಗಾನ ಪ್ರಸಂಗ ಶ್ರೀಕೃಷ್ಣ ಲೀಲೆ, ಕಂಸವಧೆ ಜರುಗಲಿದೆ.