ಜಾಲ್ಸೂರು: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಢಿಕ್ಕಿ

0

ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಜಾಲ್ಸೂರಿನಲ್ಲಿ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ.

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಬೈಕ್ ಪುರುಷೋತ್ತಮ ಅವರಿಗೆ ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಸ್ಥಳೀಯರು ಸೇರಿ ರಿಕ್ಷಾದಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದು, ವೈದ್ಯರ ಸಲಹೆಯಂತೆ ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.


ಪುರುಷೋತ್ತಮ ಗೌಡ ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶಾರದಾ, ಪುತ್ರ ಜಾಲ್ಸೂರಿನಲ್ಲಿ ರಿಕ್ಷಾ ಚಾಲಕರಾದ ತಿಲಕ ಬೆಳ್ಳಿಪ್ಪಾಡಿ, ಸಹೋದರರಾದ ಚಂದ್ರಶೇಖರ, ಸೊಸೆ, ಮೊಮ್ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.