ಎಡಮಂಗಲ ಸಹಕಾರಿ ಸಂಘಕ್ಕೆ ಇಂದು ಚುನಾವಣೆ; ಬಿರುಸಿನ ಮತದಾನ

0

ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಇಂದು ಚುನಾವಣೆ ನಡೆಯುತ್ತಿದೆ.ಆಡಳಿತ ಮಂಡಳಿಯ 12 ಸ್ಥಾನಗಳಲ್ಲಿ 4 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು, 8 ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.

ಎಡಮಂಗಲ ಸಹಕಾರಿ ಸಂಘದ ಸಭಾಭವನದಲ್ಲಿ ಚುನಾವಣೆ ನಡೆಯುತ್ತಿದ್ದು, ಮತದಾನ ಕೇಂದ್ರದ ಹೊರಗೆ ಮುಖಂಡರು ಮತಯಾಚನೆ ನಡೆಸುತ್ತಿದ್ದಾರೆ. ಇಂದು ಸಂಜೆಯೇ ಮತ ಎಣಿಕೆ ನಡೆಯಲಿದೆ.

ಚುನಾವಣಾಧಿಕಾರಿಯಾಗಿ ಸಹಕಾರಿ ಸಂಘಗಳ ಅಧಿಕಾರಿ ಶಿವಲಿಂಗಯ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಡಿ. ಮತ್ತು ಸಿಬ್ಬಂದಿಗಳು ಸಹಕರಿಸುತ್ತಿದ್ದಾರೆ.