ಕೆವಿಜಿ ಸುಳ್ಯಹಬ್ಬ ಸಮಾಜಸೇವಾ ಸಂಘದ ವತಿಯಿಂದ ಬಾಲಪ್ರತಿಭೆ ಸೋನಾ ಅಡ್ಕಾರು ಅವರಿಗೆ ಸನ್ಮಾನ

0

ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತ್ಯೋತ್ಸವ ಅಂಗವಾಗಿ ನಡೆದ ಕೆವಿಜಿ ಸುಳ್ಯ ಹಬ್ಬ 2023 ಕಾರ್ಯಕ್ರಮದಲ್ಲಿ ಕೆವಿಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘದ ವತಿಯಿಂದ ಬಾಲಪ್ರತಿಭೆ ಸೋನಾ ಅಡ್ಕಾರು ಅವರನ್ನು ಸನ್ಮಾನಿಸಲಾಯಿತು.

ಸೋನಾ ಅಡ್ಕಾರು ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ ಐದನೇ ತರಗತಿ ವಿದ್ಯಾರ್ಥಿಯಾಗಿದ್ದು, ಜಾಲ್ಸೂರು ಗ್ರಾಮದ ಅಡ್ಕಾರಿನ ಶರತ್ ಅಡ್ಕಾರು ಹಾಗೂ ಶ್ರೀಮತಿ ಶೋಭಾ ಶರತ್ ದಂಪತಿಗಳ ಪುತ್ರಿ.