ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಸುವರ್ಣ ಮಹೋತ್ಸವದ ಪೂರ್ವ ಭಾವಿ ಕ್ರೀಡಾಕೂಟದ ಉದ್ಘಾಟನೆ

0

ಮಕ್ಕಳ ಬೆಳವಣಿಗೆಗೆ ಮೌಲ್ಯಯುತ ಶಿಕ್ಷಣದೊಂದಿಗೆ ಕ್ರೀಡಾಕೂಟವು ಅತೀ ಅವಶ್ಯಕವಾಗಿದೆ : ಎಸ್.ಅಂಗಾರ

ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ರಾಜ್ಯ ಮಟ್ಟದ ಮೆರುಗು ಬಂದಿರುವುದು ಶ್ಲಾಘನೀಯ : ಜಯಪ್ರಕಾಶ್ ರೈ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ 50 ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮವು ಜ.12,13 ಮತ್ತು 14 ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಮತ್ತು ಹಳೆವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕ್ರೀಡಾಕೂಟವನ್ನು
ಡಿ. 23, 24 ಮತ್ತು 26 ರಂದು ಕುಕ್ಕುಜಡ್ಕ ಶಾಲಾ ಮೈದಾನದಲ್ಲಿ ನಡೆಸಲಾಯಿತು.

ಡಿ.23 ರಂದು ನಡೆದ ಕ್ರೀಡಾಕೂಟದ
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವರು,ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಎಸ್. ಅಂಗಾರ ರವರು ವಹಿಸಿದ್ದರು.

ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಕಾರ್ಯದರ್ಶಿ, ನ್ಯಾಯವಾದಿ ಜಯಪ್ರಕಾಶ್ ರೈ ಚೊಕ್ಕಾಡಿಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುವರ್ಣ ಮಹೋತ್ಸವ ಸಮಿತಿಯ ಕ್ರೀಡಾಕೂಟದ ಸಂಚಾಲಕ ರಜನಿಕಾಂತ್ ಉಮ್ಮಡ್ಕ, ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ, ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಸಂಧ್ಯಾಕುಮಾರಿ,ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿಶ್ರೀಮತಿ ಚೈತ್ರಾ. ಯು
ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚೊಕ್ಕಾಡಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತೇಜಸ್ವಿ ಕಡಪಳ ಪ್ರಾಸ್ತಾವಿಕವಾಗಿ ಮಾತನಾಡಿದರು.


ಪ್ರೌಢಶಾಲಾ ವಿದ್ಯಾರ್ಥಿಗಳಾದ ಇಂಚರ ಎಂ, ಶ್ರೀಹಸ್ತಾ ಕೆ ಎಸ್, ಜಲಧಿ ಕೆ, ಶರಣ್ಯ ಎನ್, ಪವಿತ್ರ ಪ್ರಾರ್ಥಿಸಿದರು. ಅಭಿಜಿತ್, ಅಭಿಲಾಷ್, ಪುನೀತ್ ರಾಜ್, ಕಿರಣ್ ರಾಜ್, ಹಸ್ತಾ, ರಚಿತಾ, ಭಾನವಿ, ರಮ್ಯ ರವರು ಕುಕ್ಕುಜಡ್ಕ ವಿಷ್ಣುನಗರದ ವಿಷ್ಣುಮೂರ್ತಿ ದೈವಸ್ಥಾನದಿಂದ
ಬೆಳಗಿಸಿ ತಂದಿರುವ ಕ್ರೀಡಾಜ್ಯೋತಿಯನ್ನು ಉದ್ಘಾಟಕರಿಗೆ ಹಸ್ತಾಂತರಿಸಿದರು. ಚೊಕ್ಕಾಡಿ ಪ್ರೌಢಶಾಲೆಯ ಸಹಶಿಕ್ಷಕ ಹರಿಪ್ರಸಾದ ಕೆ ಸ್ವಾಗತಿಸಿದರು. ಚೊಕ್ಕಾಡಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚೈತ್ರಾ. ಯು ವಂದಿಸಿದರು.


ಶ್ರೀಮತಿ ರಶ್ಮಿ ಉಮ್ಮಡ್ಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು, ಸುವರ್ಣ ಮಹೋತ್ಸವ ಸಮಿತಿ ಸಂಚಾಲಕರು ಮತ್ತು ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಶಾಲಾ ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಡಿ. 23 ರಂದು ಅಮರಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಮತ್ತು
ಡಿ. 24 ರಂದು ಚೊಕ್ಕಾಡಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಿಗೆ ಮತ್ತು ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ವಯೋಮಿತಿಗೆ ಅನುಗುಣವಾಗಿ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು.

ಡಿ.26 ರಂದು ಸೂಪರ್ ಕ್ರಿಕೆಟ್ ಮತ್ತು 45 ವರ್ಷ ಮೇಲ್ಪಟ್ಟವರಿಗೆ ಕ್ರಿಕೆಟ್ ಪಂದ್ಯಾಟವನ್ನು ಏರ್ಪಡಿಸಲಾಯಿತು.
ಕ್ರೀಡಾಕೂಟದ ಸಂದರ್ಭದಲ್ಲಿ‌ ಕ್ರೀಡಾಪಟುಗಳಿಗೆ ಹಾಗೂ ಆಗಮಿಸಿದ ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.