ಸೋಣಂಗೇರಿ ಶಾಲಾ ವಾರ್ಷಿಕೋತ್ಸವ

0

ಹಿರಿಯರು ನಮಗಾಗಿ ಕಟ್ಟಿದ ಸರ್ಕಾರಿ ಶಾಲೆಯನ್ನು ಉಳಿಸುವುದು ನಮ್ಮ ಜವಾಬ್ದಾರಿ: ಶಾಸಕಿ ಭಾಗೀರಥಿ ಮುರುಳ್ಯ

ಶಿಕ್ಷಣದಿಂದ ಸಮಾಜದ ಪರಿವರ್ತನೆ ಸಾಧ್ಯ: ಶ್ರೀಮತಿ ಸಾವಿತ್ರಿ ರಾಮ್ ಕಣೆಮರಡ್ಕ

ಜಾಲ್ಸೂರು ಗ್ರಾಮದ ಸೋಣಂಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾ ಶಿಕ್ಷಣ ಇಲಾಖೆ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವವು ಶಾಲಾ ಸಭಾಂಗಣದಲ್ಲಿ ಡಿ.30ರಂದು ನಡೆಯಿತು.

ಕಾರ್ಯಕ್ರಮವನ್ನು ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ದೀಪ ಬೆಳಗಿಸಿ, ಉಧ್ಘಾಟಿಸಿದರು.

ಶಾಸಕಿ ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು ಆಂಗ್ಲಮಾಧ್ಯಮದ ವ್ಯಾಮೋಹ ಇರುವ ಈ ಸಮಯದಲ್ಲಿ ಹಿರಿಯರು ಕಟ್ಟಿದ ಸರ್ಕಾರಿ ಶಾಲೆಯನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರದ್ದು. ಪ್ರಾಥಮಿಕ ಶಾಲೆ ಶಿಕ್ಷಣದ ಫೌಂಡೇಶನ್. ಪ್ರಾಥಮಿಕ ಶಾಲೆಯಲ್ಲಿ ಮಗು ಪಡೆಯುವ ಶಿಕ್ಷಣ ಅವರ ಬದುಕಿನ ಕೊನೆಯವರೆಗೂ ನೆನಪಿನಲ್ಲಿ ಉಳಿಯುವಂತಹದ್ದು. ಈ ಶಾಲೆಯು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭಹಾರೈಸಿದರು.

ಕರ್ನಾಟಕ ರಾಜ್ಯ ಗ್ರಂಥಾಲಯ ನೌಕರರ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಸಾವಿತ್ರಿ ರಾಮ್ ಕಣೆಮರಡ್ಕ ಅವರು ಪ್ರಧಾನ ಭಾಷಣ ಮಾಡಿ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ ಪೋಷಕರ ಪಾತ್ರವೂ ಅಷ್ಟೇ ಮುಖ್ಯ. ಶಿಕ್ಷಣ ಪದ್ಧತಿಯಲ್ಲಿ ಹಲವಾರು ಬದಲಾವಣೆಗಳು ಇಂದಿನ ಕಾಲಘಟ್ಟದಲ್ಲಿ ನಡೆಯುತ್ತಿದ್ದು, ಕೇವಲ ಅಂಕ ಪಡೆಯುವುದಕ್ಕಾಗಿಯೇ ಶಿಕ್ಷಣ ಅಲ್ಲ. ಸಮಾಜದ ಪರಿವರ್ತನೆಗೂ ಶಿಕ್ಷಣ ಮುಖ್ಯ. ವಿದ್ಯಾರ್ಥಿಗಳು ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಚಿದಾನಂದ ಕುಕ್ಕಂದೂರು ಹಾಗೂ ನಾಗರಿಕ ಸೇವಾ ಪ್ರಶಸ್ತಿ ಪುರಸ್ಕೃತ ಶಾಂತಪ್ಪ ಗೌಡ ಮೋಂಟಡ್ಕ ಆವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎ.ಎಲ್. ಅರ್ಭಡ್ಕ, ಗ್ರಾ.ಪಂ. ಸದಸ್ಯರಾದ ಈಶ್ವರ ನಾಯ್ಕ ಸೋಣಂಗೇರಿ, ಶಿವಪ್ರಸಾದ್ ನೀರಬಸಿರಿ,ಶ್ರೀಮತಿ ದೀಪಾ ಅಜಕಳಮೂಲೆ, ಶ್ರೀಮತಿ ಅಂಬಿಕಾ ಕುಕ್ಕನ್ನೂರು, ಕೆ.ಎಂ. ಬಾಬು ಕದಿಕಡ್ಕ, ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಪ್ರೇಮ ರೈ, ಮಂಗಳೂರು ಶ್ರೀನಿವಾಸ ಕಾಲೇಜಿನ ಪ್ರೊಸೆಸರ್ ಡಾ. ಕುಮಾರ್ ಪ್ರಸಾದ್ ಎಸ್.ಎ. , ಶ್ರೀ.ಕ್ಷೇ.ಧ.ಗ್ರಾಯೋಜನೆಯ ವಲಯ ಮೇಲ್ವಿಚಾರಕ ತೀರ್ಥರಾಮ, ನಿವೃತ್ತ ಪ್ರಾಂಶುಪಾಲ ಗೌರಿಶಂಕರ್ ಹೊಸಗದ್ದೆ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿರಂಜನ್ ಮಿತ್ತಮಜಲು, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಪ್ರಭಾಕರ ರೈ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕುಸುಮಾವತಿ ಕೆ. ಸೇರಿದಂತೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರುಗಳು, ಸಹಶಿಕ್ಷಕವೃಂದದವರು, ವಿದ್ಯಾರ್ಥಿಗಳ ಪೋಷಕರು, ಹಳೆವಿದ್ಯಾರ್ಥಿಗಳು ಸೇರಿದಂತೆ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.