ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶ ಕೆ.ವಿ.ಅರವಿಂದ್ ಭೇಟಿ – ವಿಶೇಷ ಪೂಜೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರಾದ ಕೆ.ವಿ.ಅರವಿಂದ್ ರವರು ಡಿ.30 ರಂದು ಭೇಟಿ ನೀಡಿದರು.
ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ,ಪೆರುವಾಜೆ ಸಮಿತಿ ಸದಸ್ಯರು,ವಸಂತ ಆಚಾರ್ಯ ಹಾಗು ಭಕ್ತಾದಿಗಳು ಉಪಸ್ಥಿತರಿದ್ದರು.