ಬಿಸಿಎಂ ಇಲಾಖೆ : ತಾಲೂಕು ಮಟ್ಟದ ಕ್ರೀಡಾಕೂಟ

0

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ, ಸುಳ್ಯ ತಾಲೂಕಿನ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ತಾಲೂಕು ಮಟ್ಟದ ಕ್ರೀಡಾಕೂಟ – 2023 ಕ್ರೀಡಾಕೂಟ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕ್ರೀಡಾಕೂಟದ ಧ್ವಜಾರೋಹಣವನ್ನು ಸುಳ್ಯ ತಹಶೀಲ್ದಾರರಾದ ಜಿ ಮಂಜುನಾಥ್ ರವರು ನೆರವೇರಿಸಿದರು. ಕ್ರೀಡಾಕೂಟದ ಕ್ರೀಡಾಜ್ಯೋತಿಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಬೆಳಗಿಸಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಾ ರವರು ಉಪಸ್ಥಿತರಿದ್ದರು.