ಇಷ್ಟಾರ್ಥ ಸಿದ್ಧಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದೈವಕ್ಕೆ ತಲೆಪಟ್ಟಿ ಕೊಡುಗೆಯಾಗಿ ನೀಡಿದ ಉದ್ಯಮಿ!

0

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಹರೀಶ್ ಗೌಡ ಮತ್ತು ಶ್ರೀಮತಿ ಐಶ್ವರ್ಯ ದಂಪತಿ ತಮ್ಮ ಇಷ್ಟಾರ್ಥ ಸಿದ್ಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ದೈವಕ್ಕೆ ತಲೆಪಟ್ಟಿ ಸೇರಿದಂತೆ ಹಲವು ಆಭರಣಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ನಿಕಟಪೂರ್ವ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ, ಸಿಬ್ಬಂದಿ ಶೆಟ್ಟಿಗಾರ್, ನಾಗೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.