ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನ ಜಾತ್ರೋತ್ಸವ ಸಮಿತಿ

0

ಅಧ್ಯಕ್ಷರಾಗಿ ಪಿ.ಎಸ್.ಗಂಗಾಧರ್ ಆಯ್ಕೆ

ಉಬರಡ್ಕ‌ ಶ್ರೀ ನರಸಿಹ ಶಾಸ್ತಾವು ದೇವರ ವಾರ್ಷಿಕ ಜಾತ್ರಾ ಉತ್ಸವವು ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು ಸಮಾಲೋಚನಾ ಸಭೆಯು ಡಿ.30 ದೇವಸ್ಥಾನದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರತ್ನಾಕರ ಗೌಡ ಬಳ್ಳಡ್ಕರವರ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾಗಿ ಪಿ.ಎಸ್ ಗಂಗಾಧರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಉಬರಡ್ಕ, ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಯನ್. ಅಜ್ಜಯ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಎಂ.ಎಚ್, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾದ ಶಾರದಾ ಡಿ.ಶೆಟ್ಟಿ, ಯು.ವಿ. ಭಾಸ್ಕರ ರಾವ್, ಗಿರಿಧರ ದಾಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಾತ್ರೋತ್ಸವದ ಪೂರ್ಣ ಪ್ರಮಾಣದ ಸಮಿತಿಯನ್ನು ಜ.7 ರಂದು ಸಭೆ ನಡೆಸಿ ಮಾಡಲಾಗುವುದೆಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ್ ತಿಳಿಸಿದ್ದಾರೆ.