ಸಂಪಾಜೆ: ಪೆಲ್ತಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಜಖಂ

0

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ಡಿ.31ರಂದು ಸಂಜೆ ಸಂಪಾಜೆ ಗ್ರಾಮದ ಪೆಲ್ತಡ್ಕ ಎಂಬಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತೆನ್ನಲಾಗಿದೆ.
ಕಾರಿನಲ್ಲಿ ಚಾಲಕ ಸೇರಿ ಐದು ಜನರಿದ್ದು, ಎಲ್ಲರೂ ಅಲ್ಪಸ್ವಲ್ಪ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೆಂದು ತಿಳಿದುಬಂದಿದೆ.