ಚೊಕ್ಕಾಡಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸುವರ್ಣ ಮಹೋತ್ಸವ ಸಂಭ್ರಮಕಾರ್ಯಕ್ರಮವು ಜ.12,13 ಮತ್ತು 14 ರಂದು ನಡೆಯಲಿದ್ದು ಆಮಂತ್ರಣ ಪತ್ರ ಬಿಡುಗಡೆಯು ಇಂದು ಬೆಳಗ್ಗೆ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ,ಮಾಜಿ ಸಚಿವ ಎಸ್.ಅಂಗಾರ ರವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಚೊಕ್ಕಾಡಿ ವಿದ್ಯಾ ಸಂಸ್ಥೆ ಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಸಮಿತಿ ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ಹರ್ಷವರ್ಧನ ಬೊಳ್ಳೂರು, ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ವೆಂಕಟ್ರಮಣ ಗೌಡ ಇಟ್ಟಿಗುಂಡಿ,
ಸತ್ಯಪ್ರಸಾದ್ ಪುಳಿಮಾರಡ್ಕ,
ಆನಂದ ಗೌಡ ಚಿಲ್ಪಾರು,
ಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ, ಪಂ.ಸದಸ್ಯೆ ದಿವ್ಯ ಮಡಪ್ಪಾಡಿ ಹಾಗೂ ಶಾಲಾ ಅದ್ಯಾಪಕ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಸುವರ್ಣ ಮಹೋತ್ಸವದ ಕಾರ್ಯಕ್ರಮದ ರೂಪು ರೇಷೆಗಳ ಕುರಿತು ಸಮಿತಿ ಅಧ್ಯಕ್ಷ ಎಸ್.ಅಂಗಾರ ರವರು ಮಾಹಿತಿ ಮಾರ್ಗದರ್ಶನ ನೀಡಿದರು.
ಆಮಂತ್ರಣ ಪತ್ರ ಮನೆ ಮನೆಗೆ ತಲುಪಿಸುವ ಬಗ್ಗೆ ಸಮಿತಿ ಸದಸ್ಯರು ಹಾಗೂ ಶಿಕ್ಷಕರ ತಂಡವನ್ನು ರಚಿಸಿ ತಂಡದ ಪ್ರಮುಖರಿಗೆ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಮಾಹಿತಿ ನೀಡಿದರು.