ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಮನೆ – ಮನೆಗೆ ಅಯೋಧ್ಯೆ ಮಂತ್ರಾಕ್ಷತೆ ವಿತರಣೆ

0

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಬಂದಿರುವ ಮಂತ್ರಾಕ್ಷತೆ ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಜ.1ರಂದು ಬೆಳಿಗ್ಗೆ ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯು ಜ.22ರಂದು ನಡೆಯಲಿದ್ದು, ಈ ಪ್ರಯುಕ್ತ ಕಳೆದ ಮೂರು ವಾರಗಳ ಹಿಂದೆ ದೇವಸ್ಥಾನಕ್ಕೆ ಬಂದಿದ್ದ ಮಂತ್ರಾಕ್ಷತೆಗೆ ನಿರಂತರ ಪೂಜೆ ಸಲ್ಲಿಸಲಾಗಿದ್ದು, ಜ.1ರಿಂದ ಗ್ರಾಮದ ಪ್ರತೀ ಹಿಂದೂ ಬಾಂಧವರ ಮನೆಗೆ ವಿತರಿಸುವ ಕಾರ್ಯ ನಡೆಯಲಿದೆ.
ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.