ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

0

2023-24ನೇ ಸಾಲಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿರುವಂತಹ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನಿಸಲಾಗುವುದು.
ಅರ್ಜಿ ನಮೂನೆಯನ್ನು ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಪಡೆದುಕೊಳ್ಳುವುದು ದೂರವಾಣಿ ಸಂಖ್ಯೆ: 08257-230239 ಇವರಿಂದ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಇಲ್ಲಿಗೆ ಅರ್ಜಿಯನ್ನು ದಿನಾಂಕ: ಜ.10 ರ ಒಳಗೆ ಸಲ್ಲಿಸುವುದು.