ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪೆರಾಜೆ ಶ್ರೀ ಶಾಸ್ತಾವು ದೇವರ ಸನ್ನಿಧಿಯಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಮಹಾರುದ್ರಯಾಗ ಕಲಶಾಭಿಷೇಕ , ಮಹಾಪೂಜೆ, ರಂಗಪೂಜೆಯು ಜ‌.30ರಂದು ಜರುಗಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಜ.5ರಂದು ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.

ಜ.30ರಂದು ಬೆಳಿಗ್ಗೆ ಮಹಾರುದ್ರಯಾಗ, ನಂತರ ದೇವರಿಗೆ ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ, ರಾತ್ರಿ ರಂಗಪೂಜೆ ನಡೆಯಲಿದೆ.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮಚೂರು , ದೇವತಕ್ಕ ರಾಜಗೋಪಾಲ ರಾಮಕಜೆ, ಆಡಳಿತ ಸಹಕಾರ್ಯದರ್ಶಿ ಚಿನ್ನಪ್ಪ ಅಡ್ಕ, ತಕ್ಕಮುಖ್ಯಸ್ಥರುಗಳಾದ ಗಣಪತಿ ಕುಂಬಳಚೇರಿ, ಪುರುಷೋತ್ತಮ ನಿಡ್ಯಮಲೆ, ಆಡಳಿತ ಮಂಡಳಿಯ ಸದಸ್ಯರುಗಳಾದ ಹೊನ್ನಪ್ಪ ಕೆ.ಬಿ., ಚಿನ್ನಪ್ಪ ಕಾಸ್ಪಾಡಿ, ನಂಜಪ್ಪ ನಿಡ್ಯಮಲೆ, ಬಿ.ಬಿ. ಪುರುಷೋತ್ತಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.