ಬ್ಯಾನರ್ ಹರಿದ ಕಿಡಿಗೇಡಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಆಗ್ರಹ

0

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಹಾಕಲಾಗಿದ್ದ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಬ್ಯಾನರನ್ನು ಕಿಡಿಗೇಡಿಗಳು ಹಾನಿ ಮಾಡಿರುವುದಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಖಂಡನೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಕದಡಲು ಯತ್ನಿಸುತ್ತಿರುವ ಶಕ್ತಿಗಳನ್ನು ನಿಗ್ರಹಿಸಿ ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ ಹಾಗು ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಪೊಲೀಸರು ರಾತ್ರಿ ಗಸ್ತು ಅನ್ನು ಹೆಚ್ಚಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವಂತೆ ಅವರು ಸೂಚಿಸಿದ್ದಾರೆ.