ಕಳಂಜ : ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

0

ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಕಳಂಜ ಗ್ರಾಮ ಪಂಚಾಯತ್‌ನ ದೀನ್ ದಯಾಳ್ ಸಮುದಾಯ ಭವನ ಅಯ್ಯನಕಟ್ಟೆ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಸರಕಾರದ ಯೋಜನೆಗಳು ಕಟ್ಟ ಕಡೆಯ ಜನರಿಗೂ ತಲುಪಬೇಕು ಮತ್ತು ಯೋಜನೆಗಳ ಸಂಪೂರ್ಣ ಅರಿವು ಮೂಡಿಸುವ ಕಾರ್ಯಕ್ರಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಆಗಿದೆ ಎಂದು ತಿಳಿಸಲಾಯಿತು. ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ದ.ಕ. ಸಂಸದರಾದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ, ಪಂಚಾಯತ್ ಅಧ್ಯಕ್ಷರು-ಉಪಾಧ್ಯಕ್ಷರು, ಸದಸ್ಯರು ಹಾಗೂ ಜನ ಪ್ರತಿನಿಧಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.