ಪೆರುವಾಜೆ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಒಕ್ಕೂಟದ ಸದಸ್ಯರಿಂದ ಶ್ರದ್ದಾಕೇಂದ್ರದ ಸ್ವಚ್ಛತೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಸದಸ್ಯರು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಿದರು. ಸುಳ್ಯ ಶಾಸಕರಾದ ಕು.ಭಾಗೀರಥಿ ಮುರುಳ್ಯರವರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕ ಗೋಪಾಲಕೃಷ್ಣ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಗ್ರಾಮದ ಸೇವಾ ಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ ,ವಿಪತ್ತು ತಂಡದ ಸ್ವಯಂಸೇವಕರು ಹಾಗೂ ಒಕ್ಕೂಟದ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.