ಅಮರಮುಡ್ನೂರು ಪಂಚಾಯತ್ ಸಾಮಾಜಿಕ ಪರಿಶೋಧನಾ ಪೂರ್ವ ಭಾವಿ ಸಭೆ

0

ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 2022- 23 ನೇ ಸಾಲಿನ ಮಹಾತ್ಮಗಾಂಧಿ ನರೇಗಾ 15 ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಅನುಷ್ಠಾನ ಗೊಳಿಸಲಾಗಿರುವ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಪೂರ್ವ ಭಾವಿ ಸಭೆಯು ಜ.8 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಂಚಾಯತ್ ಅಧ್ಯಕ್ಷೆ ಜಾನಕಿ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. ನೊಡೆಲ್ ಅಧಿಕಾರಿಯಾಗಿ ಸೌಮ್ಯ ರವರು ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಭುವನೇಶ್ವರಿ ಪದವು, ಪಿ.ಡಿ.ಒ ದಯಾನಂದ ಪತ್ತುಕುಂಜ, ಸದಸ್ಯರಾದ ಅಶೋಕ ಚೂಂತಾರು, ಕೃಷ್ಣ ಪ್ರಸಾದ್ ಮಾಡಬಾಕಿಲು, ಪದ್ಮಪ್ರಿಯ ಮೇಲ್ತೋಟ, ಸೀತಾ ಹೆಚ್, ತೇಜಾವತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.