ಪೋಕ್ಸೋ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

0

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಕಳಂಜ ನಿವಾಸಿ ರಾಜೇಶ್ ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.


ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಅಶೋಕ್ ಸಿಎಂ ಹಾಗೂ ಸಿಬ್ಬಂದಿಗಳಾದ ಪ್ರವೀಣ್ ಬಾರ್ಕಿ ಮತ್ತು ಸಂತೋಷ್ ಕೆಜೆ ರವರು ಆರೋಪಿ ರಾಜೇಶನನ್ನು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಈತ ಅ.ಕ್ರಂ 46/2019 ಕಲಂ 376.506 ಐ ಪಿ ಸಿ ಮತ್ತು 4,6 ಪೋಕ್ಸೋ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ.