ಬೆಳ್ಳಾರೆ : ಬೈಕ್ – ಕಾರು ಡಿಕ್ಕಿ

0

ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಬೈಕ್ ಹಾಗೂ ಕಾರು ಅಪಘಾತವಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ಜ.11 ರಂದು ನಡೆದಿದೆ.


ಬೆಳ್ಳಾರೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರನ ಕಾಲಿಗೆ ತೀವ್ರವಾದ ಗಾಯವಾಗಿದ್ದು ಅವರನ್ನು ಕೂಡಲೇ ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದಾಗಿ ತಿಳಿದು ಬಂದಿದೆ.