ಎಡಮಂಗಲ : ವಿದ್ಯಾರ್ಥಿನಿ ಮೃತ್ಯು

0


ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕರ ಮಗಳು, ಸುಬ್ರಹ್ಮಣ್ಯ ಪದವಿ ಕಾಲೇಜಿನ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.


ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ತೃಪ್ತಿಯನ್ನು ನಿನ್ನೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ನಿನ್ನೆ ರಾತ್ರಿಯೇ ಕೊನೆಯುಸಿರೆಳೆದಳು.


ಪಾರ್ಥಿವ ಶರೀರವನ್ನು ಎಡಮಂಗಲದ ಮನೆಗೆ ತಂದು ಇಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಆಕೆಗೆ ಇಲಿಜ್ವರ ಬಾಧಿಸಿದ್ದರಿಂದ ಸಾವನ್ನಪ್ಪಿದ್ದಾಳೆಂದು‌ ಹೇಳಲಾಗಿದೆ.